


ಡೈಲಿವಾರ್ತೆ: 01/ನ./2026




ಬರಿಮಾರು ಗ್ರಾಮದ ಕಾಗೆಕಾನ ಸಂಪರ್ಕ ರಸ್ತೆ ಅಭಿವೃದ್ಧಿಗೆ ರೂ. 30 ಲಕ್ಷ ಅನುದಾನ, ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಬಂಟ್ವಾಳ : ಬರಿಮಾರು ಗ್ರಾಮದ ಕಾಗೆಕಾನ ಸಂಪರ್ಕ ರಸ್ತೆಯ ಅಭಿವೃದ್ಧಿಗಾಗಿ ರೂ. 30 ಲಕ್ಷ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾನುವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದು ನಮ್ಮ ಆದ್ಯತೆಯಾಗಿದೆ. ಉತ್ತಮ ರಸ್ತೆ ಸಂಪರ್ಕವು ಜನರ ದೈನಂದಿನ ಸಂಚಾರಕ್ಕೆ ಮಾತ್ರವಲ್ಲದೆ, ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರ ಅಗತ್ಯಗಳಿಗೂ ಬಹಳ ಮುಖ್ಯವಾಗಿದೆ. ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ ಅನುದಾನ ಒದಗಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಗೆಕಾನ ಸಂಪರ್ಕ ರಸ್ತೆಯ ಅಭಿವೃದ್ಧಿಯಿಂದ ಸ್ಥಳೀಯ ಜನರಿಗೆ ಅನುಕೂಲವಾಗಲಿದೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ರೀತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕಮಲಾಕ್ಷಿ ಕೆ. ಪೂಜಾರಿ, ಚೆನ್ನಪ್ಪ ಕೋಟ್ಯಾನ್, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸದಾಶಿವ ಜಿ. ಬರಿಮಾರು, ಪ್ರಮುಖರಾದ ದೇವಪ್ಪ ಪೂಜಾರಿ, ಜಿನರಾಜ್ ಕೋಟ್ಯಾನ್, ಮಾಧವ ಮಾವೆ, , ಗಣೇಶ್ ಬುರ್ದು, ದಿನರಾಜ್ ಹಾಗೂ ಉಪಸ್ಥಿತರಿದ್ದರು.

