ಡೈಲಿವಾರ್ತೆ: 06/ನ./2026

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಹಿರಿಯಡ್ಕ ಪಿಎಸ್‌ಐ ವರ್ಗಾವಣೆ, ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ತನಿಖೆ ಹಾಗೂ ನಿರ್ವಹಣೆಯ ಸಂದರ್ಭದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಿಗೆ (ಡಿಐಜಿ) ಸಲ್ಲಿಸಲಾಗಿತ್ತು.

ವರದಿಯಲ್ಲಿನ ಅಂಶಗಳನ್ನು ಪರಿಶೀಲಿಸಿದ ಬಳಿಕ ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು (ಪಿಎಸ್‌ಐ) ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾವಣೆಗೊಳಿಸಿ, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ.