ಡೈಲಿವಾರ್ತೆ: 11/ನ./2026

ನ.15 ರಂದು ತುಂಬೆ ಬಿ.ಎ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ : ತುಂಬೆ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ, ತುಂಬೆ ಗ್ರೂಪ್ ಅಜ್ಮಾನ್ ಯು.ಎ.ಇ ಇದರ ಸಂಸ್ಥಾಪಕರಾದ ಡಾI ತುಂಬೆ ಮೊಯ್ದಿನ್‌ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ನ. 15 ಆದಿತ್ಯವಾರದಂದು ತುಂಬೆ ಬಿ. ಎ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ ಗಂಟೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ನಡೆಯಲಿದೆ.

ಈ ಶಿಬಿರದಲ್ಲಿ ನುರಿತ ವೈದ್ಯರ ನೇತೃತ್ವದಲ್ಲಿ ಕಣ್ಣಿನ ತಪಾಸಣೆ, ಬಿ. ಪಿ., ಶುಗರ್ ಹಾಗೂ ಇತರ ಸಾಮಾನ್ಯ ಕಾಯಿಲೆಗಳ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ನೀಡಲಾಗುವುದು. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ಹಾಗೂ ಉಚಿತ ಔಷಧಿಯನ್ನು ಕೂಡ ವಿತರಿಸಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ಶಿಬಿರದಿಂದ ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ ಇರುತ್ತದೆ ಎಂದು ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.