


ಡೈಲಿವಾರ್ತೆ: 15/ನ./2026




ಸಿಇಎಸ್‌ಇಟಿ-2026 ಫಲಿತಾಂಶದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ಹ್ಯಾಟ್ರಿಕ್ ಸಾಧನೆ

ಕುಂದಾಪುರ: ಸಿಎ ಮತ್ತು ಸಿಎಸ್‌ಇಟಿ ವೃತ್ತಿಪರ ಕೋರ್ಸ್‌ಗಳಿಗೆ ಕಳೆದ 15 ವರ್ಷಗಳಿಂದ ತರಬೇತಿ ನೀಡುತ್ತಿರುವ ಕುಂದಾಪುರದ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸತತ 3 ವರ್ಷಗಳಿಂದ ಸಿಎಸ್‌ಇಟಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ.
ಈ ಬಾರಿಯೂ ಕಾಲೇಜಿನ ವಿದ್ಯಾರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ಸಂಸ್ಥೆ ನಡೆಸಿದ ಸಿಎಸ್‌ಇಟಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಕಾಲೇಜು ಶೇ.91ರಷ್ಟು ಫಲಿತಾಂಶ ದಾಖಲಿಸಿದೆ.
ಕಾಲೇಜಿನ ವಿದ್ಯಾರ್ಥಿಗಳಾದ ವಿವೇಕ್ ಕಾಂಚನ್ (270), ಶ್ರಾವ್ಯ (264), ಮನಿತಾ (246), ಸೃಜನ್ ಜಿ. (240), ಸಮೀಕ್ಷಾ ಎ. ಕುಂದರ್ (235), ಧನುಷ್ (208), ಪ್ರತೀಕ್ ಎ. (206), ಮನೋಜ್ ವಿ. (203), ಎಚ್.ಎಸ್. ವಿನುತಾ (201) ಹಾಗೂ ಅನಿರುದ್ಧ ನಾಯಕ್ (200) ಅಂಕಗಳನ್ನು ಗಳಿಸಿ ಉತ್ತೀರ್ಣರಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಎಂ.ಎಂ. ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

