


ಡೈಲಿವಾರ್ತೆ: 16/ನ./2026




ಜಿಲ್ಲಾ ಮಟ್ಟದ ರೋಟರಿ ಸಾಂಸ್ಕೃತಿಕ ಸ್ಪರ್ಧೆ: ವಲಯ 2ಕ್ಕೆ ರನ್ನರ್ಸ್ ಅಪ್ ಪ್ರಶಸ್ತಿ

ಕೋಟ: ರೋಟರಿ ಜಿಲ್ಲೆ 3182ರ ವತಿಯಿಂದ ತೀರ್ಥಹಳ್ಳಿ ರೋಟರಿ ಕ್ಲಬ್ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ‘ಕಲಾ ಸಿಂಚನ’ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಲಯ 2 ಗಮನಾರ್ಹ ಸಾಧನೆ ಮಾಡಿದ್ದು, ರನ್ನರ್ಸ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಜಿಲ್ಲೆಯ 11 ವಲಯಗಳ ರೋಟರಿ ಕ್ಲಬ್ಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ವಲಯ 2ರ ವ್ಯಾಪ್ತಿಯ ರೋಟರಿ ಕ್ಲಬ್ಗಳ ಸದಸ್ಯರು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿಗಳನ್ನು ಗಳಿಸಿದರು.
ಸಮೂಹ ನೃತ್ಯ ಸ್ಪರ್ಧೆಯಲ್ಲಿ ರೋಟರಿ ಕೋಟ ಸಿಟಿ ಪ್ರಥಮ ಸ್ಥಾನ ಪಡೆದುಕೊಂಡರೆ, ಪುರುಷರ ಚಿತ್ರಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿತು. ರೋಟರಿ ಕೋಟೇಶ್ವರ ಸಮೂಹ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಹಿಳೆಯರ ಚಿತ್ರಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯಿತು. ಅಂಪಾರು ರೋಟರಿ ಕ್ಲಬ್ ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿತು. ಈ ಸಾಧನೆಗಳ ಮೂಲಕ ವಲಯ 2 ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು.
ಕಾರ್ಯಕ್ರಮವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ರಮೇಶ್ ಆಚಾರ್ಯ ಉದ್ಘಾಟಿಸಿದರು.
ರೋಟರಿ ಜಿಲ್ಲಾ ಗವರ್ನರ್ ಬಿ.ಎಂ. ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ನಾಯಕರು, ವಲಯ 2ರ ಸಹಾಯಕ ಗವರ್ನರ್ ಸುಧಾಕರ್ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ಶ್ಯಾಮ್ ಸುಂದರ್ ನಾಯರಿ, ವಲಯ ತರಬೇತುದಾರ ಸುರೇಶ್ ಬೇಳೂರು, ರೋಟರಿ ಕೋಟ ಸಿಟಿ ಅಧ್ಯಕ್ಷ ರಾಧಾಕೃಷ್ಣ ಬ್ರಹ್ಮಾವರ್, ಕಾರ್ಯದರ್ಶಿ ಉಮೇಶ್ ನಾಯರಿ, ಆನ್ಸ್ ಕ್ಲಬ್ ಅಧ್ಯಕ್ಷೆ ದೀಪಾರಾಣಿ, ಕಾರ್ಯದರ್ಶಿ ಜ್ಯೋತಿ ನಿತ್ಯಾನಂದ, ರೋಟರಿ ಕೋಟೇಶ್ವರ ಅಧ್ಯಕ್ಷೆ ಅಕ್ಷತಾ ಗಿರೀಶ್ ಸೇರಿದಂತೆ ವಲಯ 2ರ ವಿವಿಧ ರೋಟರಿ ಕ್ಲಬ್ಗಳ ಅಧ್ಯಕ್ಷರು, ಸದಸ್ಯರು ಹಾಗೂ ಆನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

