


ಡೈಲಿವಾರ್ತೆ: 21/ನ./2026




ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಮಂಜುನಾಥ ಭಂಡಾರಿ ನೇಮಕ: ರವಿಶಂಕರ ಶೇರಿಗಾರ್ ಅಭಿನಂದನೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಿರುವುದಕ್ಕೆ ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಶಂಕರ ಶೇರಿಗಾರ್ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ರಾಜಕೀಯ ಹಾಗೂ ಸಂಘಟನಾತ್ಮಕ ವಲಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಂಜುನಾಥ ಭಂಡಾರಿ ಅವರಿಗೆ ಮಹತ್ವದ ಜವಾಬ್ದಾರಿ ನೀಡಿರುವುದು ಅವರ ಪಕ್ಷನಿಷ್ಠೆ, ಸಂಘಟನಾ ಸಾಮರ್ಥ್ಯ ಹಾಗೂ ರಾಜಕೀಯ ಅನುಭವಕ್ಕೆ ಸಂದ ಗೌರವವಾಗಿದೆ. ಅವರ ನೇಮಕದಿಂದ ವಿಧಾನಪರಿಷತ್ತಿನ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಬಲ ದೊರೆಯುವ ವಿಶ್ವಾಸವಿದೆ ಎಂದು ರವಿಶಂಕರ ಶೇರಿಗಾರ್ ತಿಳಿಸಿದ್ದಾರೆ.
ಕರ್ನಾಟಕದ ವಿವಿಧ ನಿಗಮ-ಮಂಡಳಿಗಳು ಹಾಗೂ ಪ್ರಮುಖ ಸರ್ಕಾರಿ ಹುದ್ದೆಗಳಿಗೆ 18 ಶಾಸಕರು ಮತ್ತು ಮುಖಂಡರನ್ನು ನೇಮಕಗೊಳಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದ್ದು, ಈ ನೇಮಕಾತಿ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ ಮಾಡಿದ್ದಾರೆ.
ಮಂಜುನಾಥ ಭಂಡಾರಿ ಅವರು ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಪಕ್ಷದ ಸಂಘಟನೆ ಹಾಗೂ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡಲಿ ಎಂದು ಹಾರೈಸಿರುವ ರವಿಶಂಕರ ಶೇರಿಗಾರ್, ಅವರ ಮುಂದಿನ ರಾಜಕೀಯ ಪಯಣಕ್ಕೆ ಶುಭ ಹಾರೈಸಿದ್ದಾರೆ.

