ಡೈಲಿವಾರ್ತೆ: 26/ನ./2026

ಸರ್ಕಾರಿ ಮುಖ್ಯ ಸಚೇತಕ ಡಾ. ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ

ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರನ್ನು ಕಾಂಗ್ರೆಸ್ ಮುಖಂಡರು ವಿಧಾನಸೌಧದಲ್ಲಿರುವ ಅವರ ನೂತನ ಕಚೇರಿ ಕೊಠಡಿ ಸಂಖ್ಯೆ 109ರಲ್ಲಿ ಭೇಟಿಯಾಗಿ ಆತ್ಮೀಯವಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯ ಶಂಕರ ಎ. ಕುಂದರ್, ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮಾಜಿ ಸದಸ್ಯ ಶ್ರೀನಿವಾಸ್ ಅಮಿನ್ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ದಿನೇಶ್ ಬಂಗೇರ ಗುಂಡ್ಮಿ ಉಪಸ್ಥಿತರಿದ್ದು, ಡಾ. ಮಂಜುನಾಥ ಭಂಡಾರಿ ಅವರಿಗೆ ಶುಭಾಶಯಗಳನ್ನು ಸಲ್ಲಿಸಿದರು.