



ಡೈಲಿವಾರ್ತೆ: 29/ನ./2026




ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ಮೊಝಮ್ ರಾಜ್ಯಮಟ್ಟದ ಕರಾಟೆಯಲ್ಲಿ ಚಿನ್ನ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆ!

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾರವಾರ, ಉತ್ತರ ಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರದ ವಿದ್ಯಾರ್ಥಿಯಾದ ಮೊಝಮ್ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ವಿದ್ಯಾರ್ಥಿಯ ಈ ಅಮೋಘ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

