ಡೈಲಿ ವಾರ್ತೆ : 30 ಮೇ 2022

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಮೇಲಿನ ಹಲ್ಲೆಯನ್ನು ಖಂಡಿಸಿ ಮೇ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಸಂಯುಕ್ತ ಕರ್ನಾಟಕ ಕರೆ ನೀಡಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಪ್ರತಿಭಟನೆ ನಡೆಯಲಿದ್ದು, ಸಂಯುಕ್ತ ಕರ್ನಾಟಕದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ ಯುವಜನ ಸಂಘಟನೆಗಳು ಸೇರಿದಂತೆ ಸಮಾನಮನಸ್ಕ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದು ಕೇವಲ ರಾಕೇಶ್ ಟಿಕಾಯತ್ ಮುಖಕ್ಕೆ ಬಳಿದಿರುವ ಮಸಿಯಲ್ಲ ಬದಲಾಗಿ, ದೇಶದ ರೈತ ಹೋರಾಟಕ್ಕೆ ಮಸಿ ಬಳಿದಿದ್ದಾಗಿದೆ. ಇದರ ಹಿಂದೆ ಬಿಜೆಪಿ ಷಡ್ಯಂತ್ರ ಹೆಣೆದಿರುವುದು ನಿಚ್ಚಳವಾಗಿದೆ. ಇದರ ವಿರುದ್ಧ ಸಂಯುಕ್ತ ಕರ್ನಾಟಕ ಖಂಡಿಸುತ್ತದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಾರ್ವಜನಿಕವಾಗಿ ಕ್ಷಮೆ ಕೇಳಿಬೇಕು ಮತ್ತು ಈ ಷಡ್ಯಂತ್ರವನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ರಾಜ್ಯವ್ಯಾಪ್ತಿಯಾಗಿ ಹೋರಾಟಕ್ಕೆ ಕರೆ ನೀಡಿದೆ ಬಡಗಲಪುರ ನಾಗೇಂದ್ರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.