ಡೈಲಿ ವಾರ್ತೆ : 31 ಮೇ 2022

ಬೆಂಗಳೂರು: ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಭರತ್ ಶೆಟ್ಟಿ ಹಾಗೂ ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಭರತ್ ಶೆಟ್ಟಿ

ಘಟನೆ ಖಂಡಿಸಿ ಕಾಂಗ್ರೆಸ್ ನಾಯಕರು ಸೇರಿ, ರೈತಪರ ಮುಖಂಡರು ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಟಿಕಾಯತ್ ಮೇಲೆ ಪತ್ರಕರ್ತರ ಸೊಗಿನಲ್ಲಿ ಮಸಿ ಹಾಕಿದ್ದಾರೆ. ಅವರು ಯಾವ ಪಕ್ಷದವರೆ ಆದರೂ ಬಂಧನ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಮೂವರ ಬಂಧನ ಆಗಿದೆ. ಇಂತಹ ಘಟನೆ ರಾಜ್ಯದಲ್ಲಿ ಆಗಬಾರದಿತ್ತು. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾವ ಪಕ್ಷದವರು ಕೂಡ ಇಂತಹ ಕೃತ್ಯ ಮಾಡಲು ಹೇಳುವುದಿಲ್ಲ ಎಂದರು.