ಡೈಲಿ ವಾರ್ತೆ : 01 ಜೂನ್ 2022

ಹಾಸನ: ಹಾಸನ ನಗರ ಸಭೆ ಸದಸ್ಯ ಪ್ರಶಾಂತ್ ಅವರನ್ನು ದುಷ್ಕರ್ಮಿಗಳ ತಂಡ ಭೀಕರವಾಗಿ ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದೆ.

ಹಾಸನ ನಗರದ ಲಕ್ಷ್ಮೀಪುರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಬುಧವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಪ್ರಶಾಂತ್ ಅವರನ್ನು ತಡೆದು ನಿಲ್ಲಿಸಿದ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.

ಪ್ರಶಾಂತ್ ಅವರು ಹಾಸನ ನಗರ ಸಭೆಯ 16ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.