ಡೈಲಿ ವಾರ್ತೆ : 30 ಜೂನ್ 2022

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ.

ಶಾಲೆಗೆ ಬರಲು ತೊಂದರೆಯಾದಲ್ಲಿ ಅಂತಹ ಕಡೆ ರಜೆ ಘೋಷಣೆ ಮಾಡಲಾಗಿದ್ದು, ಈಗಾಗಾಲೇ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಪಾಠ ನಡೆಸಲು ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದಾರೆ.