ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರ, ಪಡೀಲ್, ಕೋಡಿಕಲ್, ಮಾಲೆಮಾರ್ ನಲ್ಲಿ ನೀರು ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಜಿಲ್ಲಾಡಳಿತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ.

ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದ್ದು ವಾಹನ ಉಂಟಾಗಿದೆ. ಸವಾರರು ನೀರಿನಲ್ಲಿ ತೇಲಾಡುವ ಸ್ಥಿತಿ ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್, ಪಡೀಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ಪಡೀಲ್, ಕಣ್ಣೂರು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆನೀರು ಹೆದ್ದಾರಿಯಲ್ಲಿ ನಿಂತಿದ್ದು ವಾಹನ ಸಂಚಾರಕ್ಕೆ ತೊಡಕಾಗಿದೆ.

ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗಿದ್ದು ಪೂರ್ತಿ ಮಳೆ ನೀರಿನಲ್ಲಿ ಜಲಾವೃತ ಆಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ಮಂಗಳೂರಿನ ಹಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಬೆಳ್ಳಂಬೆಳಗ್ಗೆ ಸಾರ್ವಜನಿಕರು ಕಷ್ಟಕ್ಕೆ ಒಳಗಾಗಿದ್ದಾರೆ. ಮಾಲೆಮಾರ್, ಕೊಟ್ಟಾರದಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುತ್ತದೆ. ಹೆದ್ದಾರಿಯಲ್ಲಿ ನೀರು ಹರಿಯುವುದು ಸಾಮಾನ್ಯ ಅನ್ನುವಂತಾಗಿದೆ.

ಹವಾಮಾನ ಇಲಾಖೆಯಿಂದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 26ರಿಂದ 30 ರ ವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿತ್ತು. ಈಗ ಎರಡು ದಿನಗಳಿಂದ ಭಾರೀ ಮಳೆ ಆಗತೊಡಗಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜು, ಪಿಯು ಮತ್ತು ಡಿಗ್ರಿ ಕಾಲೇಜಿಗೆ ರಜೆ ನೀಡಿದೆ. ಮಂಗಳೂರು ನಗರದಲ್ಲಿ ಈಗಾಗಲೇ ಶಾಲೆ ಶುರುವಾಗಿದ್ದಲ್ಲಿ ರಜೆ ಕೊಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಅಲ್ಲದೆ, ಗ್ರಾಮಾಂತರ ಪ್ರದೇಶಗಳಲ್ಲಿ ಸ್ಥಳೀಯ ಶಿಕ್ಷಣಾಧಿಕಾರಿ, ತಹಸೀಲ್ದಾ‌ ಮುಂಜಾಗ್ರತೆ ವಹಿಸುವಂತೆ ನೀಡಿದ್ದಾರೆ. ಜಿಲ್ಲಾಧಿಕಾರಿ ಸೂಚನೆ