ಡೈಲಿ ವಾರ್ತೆ : 30 ಜೂನ್ 2022

ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲು ಶಾಲಾ ಮುಖ್ಯಸ್ಥರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಶಾಲೆಗಳಿಗೆ ರಜೆ ನೀಡುವ ಬಗ್ಗೆ ಶಿಕ್ಷಣ ಇಲಾಖೆಯ ಮಾಹಿತಿಯನ್ನೂ ಪಡೆಯುತ್ತಿದ್ದೇವೆ. ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾಣ ಗೈಕೊಳ್ಳುತ್ತೇವೆ. ಆದರೆ ಅಪಾಯ ಇರುವ ಕಡೆಗಳಲ್ಲಿ ಅಗತ್ಯವಿರುವ ಕಡೆ ಶಾಲೆಗಳಿಗೆ ರಜೆ ಘೋಷಿಸಲು ಆಯಾ ಶಾಲಾ ಮುಖ್ಯಸ್ಥರಿಗೆ ಅಧಿಕಾರಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಇಂದು ಪಡುಬಿದ್ರೆಯ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆಗೆ ಮಾತುಕತೆ ನಡೆಸಿದ್ದೇವೆ. ಹಾಗೂ ಮಳೆಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗೃತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದೇವೆ.

ಇದರೊಂದಿಗೆ ಪ್ರವಾಹದ ಸಂದರ್ಭದಲ್ಲಿ ಯಾವ ರೀತಿ ವ್ಯವಸ್ಥೆ ಮಾಡಿಕೊಳ್ಳಬೇಕು, ಬೋಟ್ ನ ವ್ಯವಸ್ಥೆ ಮಾಡುವ ಬಗ್ಗೆ, ಸಿಬ್ಬಂದಿಗಳ ವ್ಯವಸ್ಥೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಜಿಲ್ಲಾಡಳಿತ ವತಿಯಿಂದ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಕೂಡಾ ಜಾಗೃತರಾಗಿದ್ದುಕೊಂಡು ಸಹಕಾರ ನೀಡಬೇಕು ಎಂದು ತಿಳಿಸಿದರು. ಹಾಗೂ ತುರ್ತು ಸಂದರ್ಭದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಸೂಚನೆ ನೀಡಿದರು.