ಡೈಲಿ ವಾರ್ತೆ : 01 ಆಗಸ್ಟ್ 2022

ಸುಳ್ಯ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಗ್ಗೆ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ, ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಜತೆಯಲ್ಲಿದ್ದರು.