ಡೈಲಿ ವಾರ್ತೆ : 01 ಆಗಸ್ಟ್ 2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿ ಹಾಗೂ ಮಂಗಳೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ರಾತ್ರಿ ನಿಷೇಧಾಜ್ಞೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ 200ಕ್ಕೂ ಅಧಿಕ ಮಂದಿ ಹಾಗೂ 90ಕ್ಕೂ ಅಧಿಕ ವಾಹನಗಳನ್ನು ಮಂಗಳೂರಲ್ಲಿ ವಶಪಡಿಸಿಕೊಳ್ಳಲಾಗಿದೆ.

ವಾಹನ ಪರಿಶೀಲನೆ ಬಳಿಕ ರಿಲೀಸ್ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ 19 ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಉಲ್ಲಂಘಿಸಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.