ಡೈಲಿ ವಾರ್ತೆ : 01 ಆಗಸ್ಟ್ 2022

ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ ಯವರನ್ನು ಇಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ,ಬೈಂದೂರು ವಲಯದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿನ ಛಾಯಾಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಡೆಯವರು ಆಧುನಿಕ ತಂತ್ರಜ್ಞಾನದಿಂದ ಛಾಯಾಗ್ರಾಹಕರು ಸವಾಲಿಗೊಳಗಾಗಿದ್ದು ಆ ಸವಾಲನ್ನು ಮೀರಿ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಎಲ್ಲಾ ಛಾಯಾಗ್ರಾಹಕರಿಗೂ ಭಗವಂತನ ಅನುಗ್ರಹ ಸದಾಕಾಲವೂ ಇರಲಿ ಎಂದರು.

ಈ ಸಂದರ್ಭ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾದ ಆನಂದ ಬಂಟ್ವಾಳ್, ಕುಂದಾಪುರ-ಬೈಂದೂರು ವಲಯ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ, ಸಲಹಾ ಸಮಿತಿ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ,ಪ್ರಧಾನ ಕಾರ್ಯದರ್ಶಿ ಸುರೇಶ್ ಜಮದಗ್ನಿ,ಅಮೃತ್ ಬೀಜಾಡಿ,ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.