ಡೈಲಿ ವಾರ್ತೆ : 30 ಆಗಸ್ಟ್ 2022

ಮಸ್ಕಿ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು : ಇಬ್ಬರ ಸಾವು,
ಚಾಲಕ ನಾಪತ್ತೆ..!

ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ಸಮೀಪ ಕಾರು ನಾಲೆಗೆ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಇನ್ನೂ ಓರ್ವ ಮಹಿಳೆ ಹಾಗೂ ಒಬ್ಬ ಪುರುಷನ ಮೃತದೇಹ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ಯಾರಾದರೂ ಇದ್ದರಾ ಎಂಬುದರ ಕುರಿತು ಹುಡುಕಾಟ ನಡೆಸಲಾಗುತ್ತಿದೆ.

ಕಾರು ಆಂಧ್ರ ಮೂಲದ್ದು ಎಂದು ತಿಳಿದುಬಂದಿದೆ. ಕಾರು ನಿಯಂತ್ರಣ ತಪ್ಪಿ ನಾಲೆಗೆ ಉರುಳಿರಬಹುದು ಎಂದು ಹೇಳಲಾಗುತ್ತಿದೆ.

ಸ್ಥಳಕ್ಕಾಗಮಿಸಿದ ಮಸ್ಕಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.