ಡೈಲಿ ವಾರ್ತೆ : 30 ಆಗಸ್ಟ್ 2022

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ..!

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆ, ಸೆಪ್ಟಂಬರ್ 30 ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಸ್ಸು ಹಾಗೂ ಲಘು ವಾಹನಗಳಿಗಷ್ಟೇ ಅವಕಾಶ ನೀಡಲಾಗಿದೆ.