ಡೈಲಿ ವಾರ್ತೆ : 30 ಆಗಸ್ಟ್ 2022

ಅಂಬಲಪಾಡಿ:ಬೈಕೊಂದು ಸವಾರನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಬೈಕ್ ಸವಾರ ಮೃತ್ಯು..!

ಉಡುಪಿ : ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಂಬಲ್ಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಕೊಡವೂರಿನ ಲಿಯನ್ ವಿಲ್ಸನ್ ಅಮ್ಮನ್ನ 19 ವರ್ಷ ಎಂದು ಗುರುತಿಸಲಾಗಿದೆ ಇವರು ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಲಿಯಾನ್ ರಾತ್ರಿ ವೇಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.