ಡೈಲಿ ವಾರ್ತೆ : 31 ಆಗಸ್ಟ್ 2022

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಲಕ್ಷಾಂತರ ರೂ. ದರೋಡೆ: ಕಳ್ಳನನ್ನು ಹಿಡಿಯುವ ಭರದಲ್ಲಿ ರೈಲಿನಿಂದ ಬಿದ್ದ ಮಹಿಳೆ…!

ಮಂಗಳೂರು : ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್ ಅನ್ನು ದರೋಡೆಕೋರನೊಬ್ಬ ದೋಚಿ ಪರಾರಿಯಾಗಿರುವ ಘಟನೆ ಕಬಕ ಮತ್ತು ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ 1.ಕಿಮೀ ದೂರದ ಹಾರಾಡಿ, ಸಿಟಿ ಗುಡ್ಡೆ ಎಂಬಲ್ಲಿ ನಡೆದಿದೆ.


ಕಾರವಾರ ಮೂಲದ ಅಧ್ಯಾಪಕ ರಮೇಶ್ ಮತ್ತು ನಿರ್ಮಲಾ ದಂಪತಿ ಚಿನ್ನಾಭರಣ ಮತ್ತು ನಗದಿದ್ದ ವ್ಯಾನಿಟಿ ಬ್ಯಾಗ್ ನೊಂದಿಗೆ ಆ.29ರಂದು ರಾತ್ರಿ ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ರೈಲನ್ನು ಹತ್ತಿದ್ದಾರೆ. ಆ.30ರ ಬೆಳಗಿನ ಜಾವ 2.20ರ ಸುಮಾರಿಗೆ ರೈಲು ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಬಂದಿದೆ.

2.30ರ ಸುಮಾರಿಗೆ ರೈಲು ಕಾರವಾರಕ್ಕೆ ರೈಲು ಹೊರಟ ವೇಳೆ ಪುತ್ತೂರು ಹಾರಾಡಿ ಬ್ರಿಡ್ಜ್ ದಾಟಿ ಮುಂದೆ ಸಿಟಿ ಗುಡ್ಡೆ ತಲುಪುತ್ತಿದ್ದಂತೆ, ನಿರ್ಮಲಾ ಅವರು ತಲೆಯ ಅಡಿಯಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ನಗದು ಇರಿಸಿದ್ದ ವ್ಯಾನಿಟಿ ಬ್ಯಾಗ್ ಅನ್ನು ಅಪರಿಚಿತ ವ್ಯಕ್ತಿ ಎಳೆಯುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಎಚ್ಚೆತ್ತ ಅವರು ಕೂಗಿ ಆ ವ್ಯಕ್ತಿಯನ್ನು ದೂಡಿದ್ದಾರೆ.
ನಿರ್ಮಲಾ ಅವರ ಕುತ್ತಿಗೆಯಲ್ಲಿದ್ದ ವ್ಯಾನಿಟಿ ಬ್ಯಾಗ್ ನೊಂದಿಗೆ ಆತ ರೈಲು ಬೋಗಿಯಿಂದ ಹಾರಲೆತ್ನಿಸಿದ್ದಾನೆ. ಆಗ ಆತನನ್ನು ಹಿಡಿದ ಮಹಿಳೆಯು ತುರ್ತು ಸಂದರ್ಭದಲ್ಲಿ ರೈಲು ನಿಲ್ಲಿಸುವ ಚೈನ್ ಎಳೆದಿದ್ದಾರೆ. ರೈಲಿನ ವೇಗ ನಿಧಾನವಾಗುತ್ತಿದ್ದಂತೆ ಅಪರಿಚಿತ ವ್ಯಕ್ತಿ ರೈಲಿನಿಂದ ಹಾರಿದ್ದಾನೆ. ಇದರ ಜೊತೆಗೆ ಮಹಿಳೆಯೂ ಆಯ ತಪ್ಪಿ ರೈಲಿನಿಂದ ಹಳಿಯ ಮೇಲೆ ಬಿದ್ದಿದ್ದಾರೆ.
ವ್ಯಕ್ತಿ 40 ಸಾವಿರ ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ರೂ ಮೌಲ್ಯದ ಸೊತ್ತುವನ್ನು ದೋಚಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ