ಡೈಲಿ ವಾರ್ತೆ : 31 ಆಗಸ್ಟ್ 2022

ವರದಿ : ಕುಮಾರ್ ನಾಯ್ಕ ಭಟ್ಕಳ

ನವಾಯತ್ ಕಾಲೋನಿ ಕ್ಲಸ್ಟರ್ ಪ್ರಾಥಮಿಕ ಶಾಲೆಗಳ ಪ್ರತಿಭಾಕಾರಂಜಿಗೆ ಚಾಲನೆ…!

ಭಟ್ಕಳ: ಇಲ್ಲಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಝಾದ್ ನಗರದಲ್ಲಿರುವ ಆಂಜುಮನ್ ಆಝಾದ್ ಪ್ರಾಥಮಿಕ ಶಾಲೆಯಲ್ಲಿ ನವಾಯತ್ ಕಾಲೋನಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ ಮಂಗಳವಾರ ನಡೆಯಿತು.

ಪ್ರತಿಭಾಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ (ಪ್ರಾಥಮಿಕ ಶಿಕ್ಷಣ) ಆಸಿಫ್ ದಾಮೋದಿ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣೆಗೆಯಾಗಬೇಕಾದರೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರಿ ಶಾಲಾ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರ ತರುವಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಸಮಯೋಚಿತವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಆಲ್ ಇಂಡಿಯಾ ಐಡಿಯಲ್ ಟೀರ‍್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಶಾಲಾ ಮಟ್ಟದಲ್ಲಿ ಗುರುತಿಸಿ ಅವರನ್ನು ರಾಜ್ಯ ಮತ್ತು ರಾಷ್ಟಿçÃಯ ಮಟ್ಟಕ್ಕೆ ತಲುಪಿಸುತ್ತಾರೆ ಈ ನಿಟ್ಟಿನಲ್ಲಿ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯ ಸಾದುಲ್ಲಾ ದಾಮ್ದಾ, ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ಮುಖ್ಯಾಧ್ಯಾಪಕ ಶಬ್ಬಿರ್ ಆಹ್ಮದ್ ದಫೇದಾರ್, ನವಾಯತ್ ಕಾಲೋನಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (ಸಿ.ಆರ್.ಪಿ) ಮುನೀರಾ ಖಾನಂ, ಮುರುಡೇಶ್ವರ ಕ್ಲಸ್ಟರ್ ಸಿಆರ್.ಪಿ ನಾಝೀಯಾ ಜಾಲಿ ಪ.ಪಂ ಸದಸ್ಯರಾದ ತನೀಮ್, ಶಹನಾಝ್, ಆಝಾದ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕಿ ಶಮೀಮ್ ಚಾಮುಂಡಿ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕಿ ಝರೀನಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ನಂತರ ವಿದ್ಯಾರ್ಥಿಗಳಿಂದ, ಧಾರ್ಮಿಕ ಪಠಣ, ಛದ್ಮವೇಷ, ಅಭಿನಯಗೀತೆ, ಚಿತ್ರಕಲೆ, ಭಾವಗೀತೆ, ಕ್ಲೆಮಾಡಲಿಂಗ್ ಮುಂತಾದ ಸ್ಪರ್ಧೆಗಳು ನಡೆದವು.