ಡೈಲಿ ವಾರ್ತೆ : 01 ಸೆಪ್ಟೆಂಬರ್ 2022

ವರದಿ :✍ಕೆ ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ.

“ಯೋಗಿ ಆದಿತ್ಯನಾಥ್ ಅವರಿಂದ ಧರ್ಮಸ್ಥಳ ಟ್ರಸ್ಟ್ ವತಿಯಿಂದ ನಿರ್ಮಿಸಲಾದ -“ಕ್ಷೇಮ ವನ ಪ್ರಕೃತಿ ಚಿಕಿತ್ಸಾ ಕೇಂದ್ರ” ಉದ್ಘಾಟನೆ…!



ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ.) ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೆಂಗಳೂರು ಸಮೀಪದ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಲಾಯಿತು.


ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಗಳೂರಿನ ನೆಲಮಂಗಲದ ಸಮೀಪ ಧರ್ಮಸ್ಥಳದ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ವನ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ವಿಧ್ಯುಕ್ತವಾಗಿ ಚಾಲನೆ ನೀಡಿದರು.


“ಭವಿಷ್ಯದಲ್ಲಿ ಪ್ರಕೃತಿ ಹಾಗೂ ಪ್ರಕೃತಿ ದತ್ತವಾಗಿ ಬಂದಿರುವ ಉಪಕರಣಗಳನ್ನು ಬಳಸಿಕೊಂಡು ಚಿಕಿತ್ಸೆಗೆ ಅನುಗುಣವಾಗಿ ವ್ಯತಿರಿಕ್ತವಾದ ಸಾಧನವನ್ನು ಬಳಸಿ ಮಾಡುವ ವಿಶೇಷ ತಂತ್ರಜ್ಞಾನವನ್ನು ಬಳಸಿ ಈ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಲು ಹೆಮ್ಮೆಯಾಗುತ್ತದೆ ಎಂದು ಯೋಗಿ ಆದಿತ್ಯನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ -“ಸಾಂಕೇತಿಕ ಸಂಗತಿಗಳು ಬದುಕಿನ ಬಹುತೇಕ ಅಂಶಗಳನ್ನು ಪೂರೈಸುತ್ತದೆ ಅದರಲ್ಲಿ ಪ್ರಕೃತಿದತ್ತವಾಗಿ ಬಂದಿರುವಂತ ಕೊಡುಗೆಗಳು ನಿಜಕ್ಕೂ ಅಗ್ರಗಣ್ಯ ಅಂತಹ ಸಮರ್ಪಕ ಬಳಕೆಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಕೆಲಸ ಮಾಡುತ್ತಿದೆ ಎಂದರು.


ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವಾರ ಟ್ರಸ್ಟ್ ವತಿಯಿಂದ ನೆಲಮಂಗಲ ಬಳಿ ನಿರ್ಮಿಸಿರುವ ಕ್ಷೇಮ ವನ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ, ಸಚಿವರಾದ ಡಾ. ಕೆ. ಸುಧಾಕರ್, ನಾರಾಯಣಗೌಡ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಟ್ರಸ್ಟಿ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರು ಅತಿಥಿ ಭಾಷಣದಲ್ಲಿ ನಡೆಯುತ್ತಾ “ಬೆಂಗಳೂರು ನಗರದ ಜನರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದ ಪ್ರಕೃತಿಚಿಕಿತ್ಸಾ ಉಪಯುಕ್ತವಾಗಲಿದೆ ಅದಲ್ಲದೆ,ಇದರ ಮೂಲಕ ಉತ್ಪನ್ನಗಳನ್ನು ಬಳಸಿ ಸಮಾಜದಲ್ಲಿನ ವಿವಿಧ ಕಾಯಿಲೆಗಳನ್ನು ಗುಣಪಡಿಸುವಂತಹ ಉಪಯುಕ್ತ ಔಷಧ ಇದರಲ್ಲಿದೆ ಎಂದರು. ಒಟ್ಟಾರೆಯಾಗಿ ಜನರ ಸದುಪಯೋಗ ಸಾಮಾಜಿಕ ಮಟ್ಟದಲ್ಲಿ ವಿಶೇಷವಾದ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.