ಡೈಲಿ ವಾರ್ತೆ : 24 ಸೆಪ್ಟೆಂಬರ್ 2022

ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ!

ಮಂಗಳೂರಿ: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.

ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ನಿಗೂಢವಾಗಿ ಕಾಣೆಯಾಗಿದ್ದರು. ಘಟನೆ ಸಂಬಂಧ ಕಂಕನಾಡಿಯ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.