ಡೈಲಿ ವಾರ್ತೆ : 25 ಸೆಪ್ಟೆಂಬರ್ 2022

ಕೋಟ: ಮಣೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟೆಂಪೋ ಪಲ್ಟಿ, ಚಾಲಕ ಪಾರು.!

ಕೋಟ : ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ಹೊಡೆದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ.

ಉಡುಪಿಯಿಂದ ಕೊಲ್ಲೂರು ದೇವಸ್ಥಾನಕ್ಕೆ ತರಕಾರಿಗಳನ್ನು ಕೊಂಡೊಯ್ಯುತ್ತಿದ್ದ ಮಿನಿ ಟೆಂಪೋವೊಂದು ಅದರ ಟಯರ್ ಬ್ಲಾಸ್ಟ್ ಆದಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.

ಚಾಲಕನು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ತರಕಾರಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದು ಕಂಡು ಬಂದಿದೆ.
ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.