ಡೈಲಿ ವಾರ್ತೆ : 29 ಸೆಪ್ಟೆಂಬರ್ 2022




✍ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ.
(ಪತ್ರಕರ್ತರು& ಮಾಧ್ಯಮ ವಿಶ್ಲೇಷಕರು)
m:9632581508

“ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಸಿ. ಗ್ರೂಪ್ ಹುದ್ದೆ…!”ಪ್ರತಿಯೊಬ್ಬ ಕಾರ್ಯಕರ್ತನೂ ದೇಶದ ಆಸ್ತಿ….!”ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಸ್ಪಷ್ಟನೆ…!”

ಸುದ್ದಿ @ಮಂಗಳೂರು:-ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದ್ದರೂ, ರಾಜ್ಯಾದ್ಯಂತ ವಲ್ಲದೆ, ದೇಶಾದ್ಯಂತ ಮಿಂಚಿನ ಸಂಚಲನ ಮೂಡಿಸಿದೆ. ದುಷ್ಕರ್ಮಿಗಳಿಂದ ಹತ್ಯೆಗೆ ಬಲಿಯಾಗಿ ಸಮಾಜವೇ ಮರುಕು ಅಂಥ ಪರಿಸ್ಥಿತಿ ನಿರ್ಮಾಣವಾಗಿದ್ದು ,ಬಹುತೇಕ ಬಿಜೆಪಿ ಕಾರ್ಯಕರ್ತರು ತಮ್ಮ ಪದೋನ್ನತಿಯನ್ನು ಹಿಂಪಡೆಯುವುದರ ಮೂಲಕ ನಿಬ್ಬೆರಗಾಗಿಸಿದ್ದಾರೆ. ಆದರೆ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿ ನೂತನ ಇವರಿಗೆ ತಮ್ಮ ಸರ್ಕಾರದ ಅವಧಿಯ ಸಿ .ಗ್ರೂಪ್ ಹುದ್ದೆಯನ್ನು ನೀಡುವುದರ ಮೂಲಕ ಬಿಜೆಪಿ ಕಾರ್ಯಕರ್ತರ ಜತೆಗೆ ನಾವಿದ್ದೇವೆ ಎನ್ನುವ ಸೂಚನೆಯಂತೆ ಸಿಎಂ ಬಸವರಾಜ್ ಬೊಮ್ಮಾಯಿ ಉತ್ತರಿಸಿದರು.

ಪ್ರತಿಯೊಬ್ಬ ಕಾರ್ಯಕರ್ತರು ದೇಶದ ಬೆನ್ನೆಲಬು ಬಿಜೆಪಿ ಪರವಾಗಿ ನಿಲ್ಲುವಂತ ಪ್ರತಿಯೊಬ್ಬ ಕಾರ್ಯಕರ್ತನಿಗೂ ತಮ್ಮದೇ ಆದ ಚೌಕಟ್ಟಿನಲ್ಲಿ ವಿಶೇಷ ಮಾನ್ಯತೆ ನೀಡಲಾಗುವುದು ಎಂದರು.

ದೇಶಕ್ಕಾಗಿ ಹೋರಾಡುವ ಯೋಧನೂ ಇದೇ ರೀತಿಯಾದಂತಹ ಸಂಕಲ್ಪ ಮಾಡುವ ಕೆಲಸ ಬಿಜೆಪಿ ಮಾಡಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಅದರಂತೆ ಇದೀಗ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.

ಈ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡ ರಾಜ್ಯ ಬಿಜೆಪಿ, ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಬರೆದುಕೊಂಡಿದೆ. ರಾಜ್ಯ ಸರ್ಕಾರದ ಆದೇಶ ಪ್ರತಿಗಳನ್ನು ಹಂಚಿಕೊಂಡ ಬಿಜೆಪಿ, “ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ. ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಬಿಜೆಪಿ” ಎಂದು ಬರೆದುಕೊಂಡಿದೆ. ಇದನ್ನು ತನ್ನ ಟ್ವಿಟರ್ ಖಾತೆಯಲ್ಲೂ ಹಂಚಿಕೊಂಡಿದೆ.

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದು, ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರದ ಬೆಳವಣಿಗೆಯಂತೆ ಕುಟುಂಬಕ್ಕೊಂದು ಉದ್ಯೋಗದ ಆಧಾರ ನೀಡಲು ಪ್ರವೀಣ್ ಪತ್ನಿಗೆ ಸರ್ಕಾರದ ಹುದ್ದೆಯನ್ನು ಕೊಡುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದ್ದರು. ಅದರಂತೆ ಈಗ ಗುತ್ತಿಗೆ ಆಧಾರಿತ ಸರ್ಕಾರಿ ಹುದ್ದಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ.
ಒಟ್ಟಾರೆಯಾಗಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅಗಲಿದ ಆತ್ಮಕ್ಕೆ ಶಾಂತಿ ದೊರಕುವುದರ ಮೂಲಕ ಪತ್ನಿ ನೂತನ್ ಅವರಿಗೆ ಸರಕಾರಿ ಸಿ ಗ್ರೂಪ್ ಹುದ್ದೆ ನೀಡುವುದರ ಮೂಲಕ ವಿಶೇಷ ಸ್ಥಾನಮಾನ ನೀಡಲಾಗಿದೆ.ನೂತನ ಇವರ ಬದುಕು ಈ ಮೂಲಕ ಸಾಗಲು ಎನ್ನುವುದೇ ಪತ್ರಿಕೆಯ ಆಶಯ.



✍ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ.