ಡೈಲಿ ವಾರ್ತೆ : 30 ಸೆಪ್ಟೆಂಬರ್ 2022

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್ ಅವರ ಸಹಾಯಕ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್ ಅವರ ಸಹಾಯಕ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ


ಮಂಗಳೂರು: ನಗರದ ಮಿನಿವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಶಿವಾನಂದ ನಾಟೇಕರ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಎನ್‌ಒಸಿಗಾಗಿ ನಾಗರಿಕರೊಬ್ಬರಿಂದ ಲಂಚ ಕೇಳಿ 4700 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾನೆ.

ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ನಡೆದಿದೆ. ಎಸಿಬಿ ರದ್ದಾಗಿ ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ಸಿಕ್ಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.