ಡೈಲಿ ವಾರ್ತೆ: 02 ಅಕ್ಟೋಬರ್ 2022

ತೆಕ್ಕಟ್ಟೆ ಮಾಲಾಡಿಯಲ್ಲಿ ಮತ್ತೆ ಬೋನಿಗೆ ಬಿದ್ದ ಚಿರತೆ..!

ಕೋಟ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಕೆಲವು ತಿಂಗಳಿಂದ ಜನರಿಗೆ ಆತಂಕ ಸೃಷ್ಟಿಸಿದ ಚಿರತೆಯೊಂದು ಇಂದು ಬೆಳಿಗ್ಗೆ ಬೋನಿಗೆ ಬಿದ್ದಿರುವುದು ಕಂಡು ಬಂದಿದೆ.

ಕಳೆದ ಸೆ. 8 ರಂದು ಸುರೇಶ್ ದೇವಾಡಿಗರ ಮನೆಯ
ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿದಿದ್ದು.
ಈ ಘಟನೆಯಿಂದ ಈ ಭಾಗದ ಜನರು ಆತಂಕಗೊಂಡಿದ್ದರು.

4 ವರ್ಷದ ಅಂತರದಲ್ಲಿ 5 ಚಿರತೆ ಸೆರೆಯಾಗಿದ್ದು. ಇದು ಬೋನಿಗೆ ಬಿದ್ದ 6 ನೇ ಚಿರತೆಯಾಗಿರುತ್ತದೆ.

ಈ ಭಾಗದಲ್ಲಿ ನಾಯಿ, ಜಾನುವಾರು ಸೇರಿದಂತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುವುದು ಮಾತ್ರವಲ್ಲದೇ ಹಾಡುಹಗಲೇ ಪ್ರತಕ್ಷವಾಗಿ ಚಿರತೆ ನಿರಂತರವಾಗಿ ಉಪಟಳ ನೀಡುತ್ತಿದ್ದು ಮಾಲಾಡಿಯ ಎಕ್ರೆಗಟ್ಟಲೆ ಇರುವ ಈ ತೋಟದಲ್ಲಿ 2018 ಆಗಸ್ಟ್ ತಿಂಗಳಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಬಳಿಕ ಚಿರತೆ ಆಗ್ಗಾಗೆ ಕಾಣಿಸಿಕೊಳ್ಳುತ್ತಿದ್ದು ಅ.6, 2019, ಡಿ.12, 2019, ಡಿ.24,2019 ರಲ್ಲಿ ಹಾಗೂ 2022 ರ ಎಪ್ರಿಲ್ ತಿಂಗಳಿನಲ್ಲಿ ‘ಆಪರೇಶನ್ ಚೀತಾ’ ಕಾರ್ಯಾಚರಣೆ ನಡೆಸಿದ ಇಲಾಖೆ ಚಿರತೆಯನ್ನು ಬೋನಿಗೆ ಬೀಳಿಸಿತ್ತು.

ಅದೇ ರೀತಿ ಈ ಬಾರಿ ಅರಣ್ಯ ಇಲಾಖೆಯು ಒಂದು ತಿಂಗಳಿಂದ ಬೋನು ಇಟ್ಟು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾಗಿದ್ದು. ಅದು ಇಂದು ಯಶಸ್ವಿಯಾಗಿದೆ.

ಈ ಸಂದರ್ಭದಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ ಕಿರಣ್ ಬಾಬು, ಉಪವಲಯ ಅರಣ್ಯಾಧಿಕಾರಿ ಉದಯ್, ಅರಣ್ಯ ರಕ್ಷಕಿ ಮಾಲತಿ, ರಂಜಿತ್, ಸೋಮಶೇಖರ್, ತೆಕ್ಕಟ್ಟೆ ಗ್ರಾ.ಪಂ ಉಪಾಧ್ಯಕ್ಷ ಸಂಜೀವ ದೇವಾಡಿಗ, ಪಿಡಿಓ ಸುನೀಲ್, ಮಲ್ಯಾಡಿ ಶಿವರಾಮ್ ಶೆಟ್ಟಿ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿದರು.