ಡೈಲಿ ವಾರ್ತೆ: 23 ಅಕ್ಟೋಬರ್ 2022

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ : ಪಾರಾದ ಕುಟುಂಬ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.

ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ.

ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ವಿನಯ ಎಂಬವರ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಲಾಯಿತು. ಅಷ್ಟರೊಳಗೆ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.