ಡೈಲಿ ವಾರ್ತೆ: 30 ಅಕ್ಟೋಬರ್ 2022

ಧರ್ಮಸ್ಥಳ : ಕಾರು ಹಾಗೂ ಜೀಪ್ ಮುಖಾಮುಖಿ ಡಿಕ್ಕಿ:
ನಾಲ್ವರಿಗೆ ಗಂಭೀರ ಗಾಯ

ಧರ್ಮಸ್ಥಳ : ಕಾರು ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಬೆಳಗ್ಗೆ ನಡೆದಿದೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.