ಡೈಲಿ ವಾರ್ತೆ: 30 ಅಕ್ಟೋಬರ್ 2022

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಬ್ಬ ಬೈಕ್ ಸವಾರ ಬಲಿ..!


ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೇರಳ ಮೂಲದ ಅರ್ಷದ್ (24) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಕಳೆದ ರಾತ್ರಿ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಿಂದ ಸರಣಿ ಅಪಘಾತ ನಡೆದಿದೆ. ಗುಂಡಿ ತಪ್ಪಿಸಲು ರಸ್ತೆಯಲ್ಲಿ ಕಾರೊಂದು ಪಲ್ಟಿಯಾಗಿತ್ತು. ಈ ವೇಳೆ ಮುಂದೆ ಬರ್ತಿದ್ದ ಬೈಕ್ ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರರ ಪೈಕಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇನ್ನೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಈ ಬಗ್ಗೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.