ವರದಿ :ಕುಮಾರ್ ನಾಯ್ಕ್ ಉಪ ಸಂಪಾದಕ

ಶಿರಸಿ :-ದಿನಾಂಕ:19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ) ಶಿರಸಿ ಯೋಜನಾ ಕಛೇರಿಯಲ್ಲಿ ತಾಲ್ಲೂಕಿನ ಆಯ್ದ 18 ಮಂದಿ ವೃತ್ತಿಪರ ಶಿಕ್ಷಣ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪೇಂದ್ರ ಪೈ ಯವರು ನೆರೆವೇರಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು,ಅದರಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸುಜ್ಞಾನನಿಧಿ ನೀಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಮು ಕಿಣಿಯವರು ಮಾತನಾಡಿ ಯೋಜನೆಯಿಂದ ಸುಜ್ಞಾನನಿಧಿ ನೀಡುತ್ತಿರುವುದನ್ನು ವಿದ್ಯಾರ್ಥಿಗಳು ಪ್ರಯೋಜನ ಪಡೆದು ಉತ್ತಮ ಶಿಕ್ಷಣವಂತರಾಗಬೇಕೆಂದು ತಿಳಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರಸಿ ನಗರಸಭಾ ಅಧ್ಯಕ್ಷರಾದ ಗಣಪತಿ ನಾಯ್ಕ್‌ರವರು ಮಾತನಾಡಿ ಧರ್ಮಸ್ಥಳ ಯೋಜನೆಯಿಂದ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ನೀಡುವುದರಿಂದ ಅವರ ಶಿಕ್ಷಣಕ್ಕೆ ಉತ್ತೇಜನ ನೀಡಿದಂತಾಗುತ್ತದೆ. ಹಾಗೂ ಬಡಕುಟುಂಬದವರಿಗೆ ಸಹಾಯ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ರೂ.25,000/- ಮೊತ್ತವನ್ನು ವಿತರಣೆ ಮಾಡಲಾಯಿತು. ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಗೆ ಕ್ಷೇತ್ರದಿಂದ ರೂ.10,000/- ಮೊತ್ತದ ಸಹಾಯಧನವನ್ನು ವಿತರಣೆ ಮಾಡಲಾಯಿತು.


ಕಾರ್ಯಕ್ರಮದ ಬಗ್ಗೆ ತಾಲ್ಲೂಕಿನ ಯೋಜನಾಧಿಕಾರಿಗಳಾದ ರವಿರಾಜ್‌ ನಾಯಕ್‌ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ಪ್ರವೀಣ್‌ರವರು ಉಪಸ್ಥಿತರಿದ್ಧರು.