ಡೈಲಿ ವಾರ್ತೆ: 12 ನವಂಬರ್ 2022

ಬಂಟ್ವಾಳ ಸಂಯುಕ್ತ ಜಮಾಅತ್ ವತಿಯಿಂದ ವಕ್ಫ್, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಬಂಟ್ವಾಳ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ವತಿಯಿಂದ ವಕ್ಫ್, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ಪಾಣೆಮಂಗಳೂರು ಆಲಡ್ಕದ ಎಸ್.ಎಸ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು.



ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅತಿಥಿಗಳಾಗಿ ಭಾಗವಹಿಸಿದ್ದರು.



ಜಿಲ್ಲಾ ವಕ್ಫ್ ಅಧಿಕಾರಿ ಸಯ್ಯದ್ ಮಹಝಮ್, ಮಂಗಳೂರಿನ ಮಂಗಳಾ ಕಿಡ್ನಿ ಫೌಂಡೇಶನ್ ನ ವೈದ್ಯರಾದ ಡಾ.ಮೊಯ್ದಿನ್ ನಫ್ಸೀರ್, ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಅವರು ವಕ್ಫ್, ಆರೋಗ್ಯ ಹಾಗೂ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು.



ಸಂಸ್ಥೆಯ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್, ಬಿ.ಎಂ.ಅಬ್ಬಾಸ್ ಅಲಿ, ಮುಹಮ್ಮದ್ ಶಫಿ, ಕೋಶಾಧಿಕಾರಿ ಹಾಜಿ. ಪಿ.ಎಸ್.ಅಬ್ದುಲ್ ಹಮೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಇದೇ ವೇಳೆ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ ಅವರನ್ನು ಸನ್ಮಾನಿಸ ಲಾಯಿತು. ಪ್ರಬಂಧ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ ಉಪನ್ಯಾಸಕ ಡಿ.ಬಿ. ಅಬ್ದುಲ್ ರಹಿಮಾನ್ ಮತ್ತು ಸಹ ಶಿಕ್ಷಕ ಅಕ್ಬರ್ ಅಲಿ ಅವರನ್ನು ಗೌರವಿಸಲಾಯಿತು.



ಮಿಲಾದುನ್ನೆಬಿ ಪ್ರಯುಕ್ತ ಸಂಸ್ಥೆಯ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ನಡೆಸಲಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.



ಪ್ರಬಂಧ ಸ್ಪರ್ಧೆಯಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಶಮಾ ಫರ್ಹಾನ ಪ್ರಥಮ, ಕುಂಬ್ರ ಮರ್ಕಝುಲ್ ಹುದಾ ಕಾಲೇಜಿನ
ಸುಹೈಬತುಲ್ ಅಸ್ಲಾಮಿಯಾ ದ್ವಿತೀಯ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಝುನೈಫ್ ತೃತೀಯ ಹಾಗೂ ಮಂಗಳೂರು ಸಂತ ಆ್ಯಗ್ನೆಸ್ ಕಾಲೇಜಿನ ನಿಶಾತ್ ಫಾತಿಮಾ ಮತ್ತು ದೇವಿಶ್ರೀ, ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನ ನಫೀಸಾ ಮರ್ಝೂಕಾ, ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಆಯಿಷತ್ ಸಫೀನಾ,‌ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಶ್ಮಿತಾ ಪ್ರೋತ್ಸಾಹಕ ಬಹುಮಾನಗಳನ್ನು ಪಡೆದರು.



ಹನೀಫ್ ಹಾಜಿ ಸ್ವಾಗತಿಸಿ, ಸಂಸ್ಥೆಯ ಕಾರ್ಯದರ್ಶಿ ಅಬೂಬಕ್ಕರ್ ವಿಟ್ಲ ವಂದಿಸಿದರು. ಹಾಫಿಲ್ ಇಸ್ಮಾಯಿಲ್ ಹನೀಫಿ ಕಲ್ಲಡ್ಕ ಕಿರಾಅತ್ ಪಠಿಸಿದರು. ಶಿಕ್ಷಕ ಬಿ.ಎಂ. ತುಂಬೆ, ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.