ಡೈಲಿ ವಾರ್ತೆ: 29 ನವಂಬರ್ 2022

ದುಬೈನಿಂದ ಇ-ಸಿಗರೇಟ್ ಅಕ್ರಮ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಇ ಸಿಗರೇಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 41 ಲಕ್ಷ ಮೌಲ್ಯದ ಇ-ಸಿಗರೇಟ್ ಜಪ್ತಿ ಮಾಡಿದ್ದಾರೆ.

ನ.25ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಬ್ಬರು ಪ್ರಯಾಣಿಕರನ್ನು, ಖಚಿತ ಮಾಹಿತಿಯ ಮೇರೆಗೆ ಅಧಿಕಾರಿಗಳು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಇವರ ವಿರುದ್ಧ ಕಸ್ಟಮ್ಸ್ ಆಕ್ಟ್ 1962ರ ಅಡಿ ಪ್ರಕರಣ ದಾಖಲಾಗಿದೆ.