ಡೈಲಿ ವಾರ್ತೆ: 30 ನವಂಬರ್ 2022

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ: ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಸೈಲೆಂಟ್ ಸುನೀಲನ ಜೊತೆ ಬಿಜೆಪಿ ನಾಯಕರು ಎಂಬ ಮಾಧ್ಯಮಗಳ ವರದಿಯ ಬಳಿಕ ಬಿಜೆಪಿ ಎಚ್ಚರಗೊಂಡಿದ್ದು, ಸುನಿಲ್ ಗೆ ಬಿಜೆಪಿ ಸೇರ್ಪಡೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಸಹಿಸುವುದಿಲ್ಲ. ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲ್ನ ನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.


ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.


ಬಿಜೆಪಿ ನಾಯಕರು ಕೇವಲ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡಿದ್ದರು. ಆದ್ರೆ ಸೈಲೆಂಟ್ ಸುನೀಲ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಲಿಲ್ಲ. ಆದರೆ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿರುವ ಫೈಟರ್ ರವಿ ಬಗ್ಗೆ ಬಿಜೆಪಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.