ಡೈಲಿ ವಾರ್ತೆ: 01 ಡಿಸೆಂಬರ್ 2022

ಸುಳ್ಯದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ: ಜನರಲ್ಲಿ ಆತಂಕ

ಸುಳ್ಯ : ಸುಳ್ಯದಲ್ಲಿ ಮತ್ತೆ ಭೂಕಂಪ ಉಂಟಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಸಂಜೆ 7.32ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಗ್ರಾಮದ ಜನರು ಆತಂಕಕ್ಕೀಡಾಗಿ ಮನೆಯಿಂದ ಹೊರ ಬಂದಿದ್ದಾರೆ.

ಮಡಪ್ಪಾಡಿ ಗ್ರಾಮದ ಕಡ್ಯ , ಹಾಡಿಕಲ್ಲು ಗ್ರಾಮದಲ್ಲಿ ಭಾರಿ ಶಬ್ಧದೊಂದಿಗೆ ಭೂಕಂಪದ ಅನುಭವ ಉಂಟಾಗಿದೆ. ಕಳೆದ ಐದು ತಿಂಗಳ ಹಿಂದೆ ಸಂಪಾಜೆ, ಚೆಂಬು, ಕರಿಕೆ, ಅರಂತೋಡು, ತೊಡಿಕಾನ, ಪೆರಾಜೆ, ಗೂನಡ್ಕ ಸೇರಿದಂತೆ ಸುಳ್ಯ ತಾಲೂಕಿನ ಹಲವು ಕಡೆ ಹಿಂದೆ ಸರಣಿ ಭೂಕಂಪ ಉಂಟಾಗಿತ್ತು.