ಮುಂಬೈ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಸೆಲ್ಲೂರ್ ಬಳಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತಪಟ್ಟವರಲ್ಲಿ ಬಿಜೆಪಿ ಶಾಸಕ ವಿಜಯ ರಹಾಂಗ್ ಡಾಲೇ ಅವರ ಪುತ್ರ ಆವಿಷ್ಕಾರ್ ಕೂಡ ಸೇರಿದ್ದಾನೆ. ಮಧ್ಯರಾತ್ರಿ 1.30ರ ಹೊತ್ತಿಗೆ ಈ ದುರಂತ ಸಂಭವಿಸಿದೆ.


ವಿದ್ಯಾರ್ಥಿಗಳು ವಾರ್ಧಾಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪ್ರಶಾಂತ್ ಹೋಲ್ಕರ್ ತಿಳಿಸಿದ್ದಾರೆ.

ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ
ನೀಡಲಾಗಿದೆ.