ಡೈಲಿ ವಾರ್ತೆ: 09 ಡಿಸೆಂಬರ್ 2022

✒️ ಓಂಕಾರ ಎಸ್. ವಿ. ತಾಳಗುಪ್ಪ

ನಾಸಿಕ್ – ಪುಣೆ ರಸ್ತೆಯಲ್ಲಿ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಏಳು ವಾಹನಗಳು ಜಖಂ

ಪುಣೆ : ರಸ್ತೆಯಲ್ಲಿ ವೇಗವಾಗಿ ಬಂದ ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್‌ಆರ್‌ಟಿಸಿ) ಬಸ್ ಎದುರಿನ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ವಾಹನಗಳು ಜಖಂಗೊಂಡ ಘಟನೆ ನಾಸಿಕ್-ಪುಣೆ ರಸ್ತೆಯಲ್ಲಿರುವ ಪಲ್ಸೆ ಗ್ರಾಮದಲ್ಲಿ ನಡೆದಿದೆ.

ಪುಣೆ (Pune) ಜಿಲ್ಲೆಯ ರಾಜಗುರುನಗರದಿಂದ ನಾಸಿಕ್‌ಗೆ ಹೋಗುತ್ತಿತ್ತು. ಈ ವೇಳೆ ಪಲ್ಸೆ ಗ್ರಾಮದ ಬಳಿ ಬರುತ್ತಿದ್ದಂತೆ ಬಸ್‌ನ ಬ್ರೇಕ್ ಫೇಲ್ (break fail) ಆಗಿತ್ತು. ಇದರಿಂದಾಗಿ ನಿಯಂತ್ರಣ ತಪ್ಪಿ ಮುಂದೆ ಹೋಗಿದೆ. ನಾಲ್ಕು ದ್ವಿಚಕ್ರ ವಾಹನಗಳು ಮತ್ತು ಎರಡು ಎಸ್‌ಯುವಿಗಳು ಡಿಕ್ಕಿ ಹೊಡೆದವು ಎಂದು ವರದಿಯಾಗಿದೆ.

ಬೆಂಕಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಬಸ್ಸಿನ ಗಾಜು ಒಡೆದು 43 ಜನರು ಹೊರಬಂದಿದ್ದಾರೆ. ಇನ್ನೂ ಬಸ್’ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ನಾಸಿಕ್ ಮುನ್ಸಿಪಲ್ ಕಾರ್ಪೊರೇಷನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.✒️ *ಓಂಕಾರ ಎಸ್. ವಿ. ತಾಳಗುಪ್ಪ*