ಡೈಲಿ ವಾರ್ತೆ: 12 ಡಿಸೆಂಬರ್ 2022

ದಕ್ಷಿಣಕನ್ನಡ: ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಕಾರು ಪಲ್ಟಿ: ತಾಯಿ ಮಗು ಮೃತ್ಯು, ನಾಲ್ವರು ಗಂಭೀರ

ಸುಳ್ಯ: ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಇನ್ನೋವಾ ಕಾರು ಸ್ಕಿಡ್ ಆಗಿ ಪಲ್ಟಿಯಾಗಿ ಮರಕ್ಕೆ ಗುದ್ದಿದ ಪರಿಣಾಮ ಸುಳ್ಯ ಮೂಲದ ತಾಯಿ, ಮಗು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ದಾರುಣ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಎಂಬಲ್ಲಿ ಸೋಮವಾರ ಸಂಭವಿಸಿದೆ.

ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಅವರ ಮಗು 3 ವರ್ಷ ಪ್ರಾಯದ ಶಜಾ ಮೃತರು.


ಕಾರಲ್ಲಿದ್ದ ನಾಲ್ವರು ತೀವ್ರ ಗಾಯಗೊಂಡಿದ್ದು, ಗಾಯಾಳುಗಳನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ತರಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.