ಡೈಲಿ ವಾರ್ತೆ: 30 ಡಿಸೆಂಬರ್ 2022

ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳಿಗೆ ಸುಟ್ಟ ಗಾಯ


ಯಾದಗಿರಿ : ಮೈ ಮೇಲೆ ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿಯ ಜಿಲ್ಲೆಯ ಸುರಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೊಮ್ಮನ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ನೀಡುವ ಸಂದರ್ಭದಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಸುಟ್ಟ ಗಾಯಗಳಾಗಿವೆ. ಮಕ್ಕಳನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲಾ ಸಿಬ್ಬಂದಿಗಳ ನಿರ್ಲಕ್ಷತನದಿಂದ ಇದು ನಡೆದಿದೆ ಎಂದು ಆರೋಪಿಸಿದ್ದಾರೆ.