ಡೈಲಿ ವಾರ್ತೆ: 31 ಡಿಸೆಂಬರ್ 2022

ಮಡಿಕೇರಿ: ಮನೆಯ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಗೆ ಬೆಂಕಿ ಹಚ್ಚಿದ ಕಿಡಿಗೇಡಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ: ಮನೆಯ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿರುವ ಘಟನೆ ಮಡಿಕೇರಿಯ
ರಾಣಿಪೇಟೆಯಲ್ಲಿ ನಡೆದಿದೆ.

ಅಬುತಾಹೀರ್ ಎಂಬವರು ಆಟೋರಿಕ್ಷಾವನ್ನು ಮನೆಯ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದರು.ಕಿಡಿಗೇಡಿ
ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

ಈ ಬಗ್ಗೆ ಅಬುತಾಹೀರ್ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಗರ ಪೊಲೀಸರು ಸಿ.ಸಿ.ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ