ಡೈಲಿ ವಾರ್ತೆ:10 ಜನವರಿ 2023

ಬೆಂಗಳೂರು : ರಸ್ತೆಗೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್, ತಾಯಿ ಮತ್ತು ಮಗು ಮೃತ್ಯು

ಬೆಂಗಳೂರು: ಬೆಂಗಳೂರಿನ ಹೆಚ್ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ರಸ್ತೆಗೆ ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು.

ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕಬ್ಬಿಣದ ರಾಡುಗಳು ಬೈಕ್ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಮಗು ಮೇಲೆ ಬಿದ್ದಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತು ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.