ಬಂಟ್ವಾಳ : ವ್ಯಕ್ತಿಯೋರ್ವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ಪಾಣೆಮಂಗಳೂರು ಸಮೀಪದ ನಂದಾವರ ಸೇತುವೆ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ತಾಲೂಕಿನ ಸಜಿಪಮುನ್ನೂರು ಗ್ರಾಮದ ಮಡಿವಾಳಪಡು ನಿವಾಸಿ ದೇವಪ್ಪ ಮಡಿವಾಳ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಸಣ್ಣ ಪುಟ್ಟ ಖಾಯಿಲೆಯಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.