



ಡೈಲಿ ವಾರ್ತೆ:17 ಜನವರಿ 2023


ಸಿಮೆಂಟ್ ತುಂಬಿದ ಲಾರಿ ಬೆಂಕಿಗಾಹುತಿ
ಯಲ್ಲಾಪುರ: ತಾಲ್ಲೂಕಿನ ಅರಬೈಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಬಾಗಲಕೋಟೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಸಿಮೆಂಟ್ ತುಂಬಿದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಕರಕಲಾಗಿದೆ.
ಮಂಗಳವಾರ ಬೆಳಿಗ್ಗೆ 8.30 ರ ಸುಮಾರಿಗೆ ಅವಘಡ ಸಂಭವಿಸಿದೆ. ಅರಬೈಲ್ ಘಟ್ಟ ಇಳಿದ ಲಾರಿಯ ಲೈನರ್ ಬಿಸಿಯಾಗಿ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ
ಚಾಲಕ, ಸಹಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಆಗಮಿಸಿದ್ದಾರೆ. ಲಾರಿ ಹೊತ್ತಿ ಉರಿಯುತ್ತಿರುವ ಕಾರಣ ಹೆದ್ದಾರಿಯಲ್ಲಿ ಸಂಚಾರಕ್ಕೆ ವ್ಯತ್ಯಯವಾಗಿದೆ.