ಡೈಲಿ ವಾರ್ತೆ:17 ಜನವರಿ 2023

ಬಂಟ್ವಾಳ, ಎಸ್.ಡಿ.ಪಿ.ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಗೆ ಸ್ವಾಗತ ಕಾರ್ಯಕ್ರಮ ಹಾಗೂ ಬಹಿರಂಗ ಸಭೆ

ಬಂಟ್ವಾಳ : ಮುಂಬರುವ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಗೆ ಬಿ.ಸಿ. ರೋಡ್ – ತಲಪಾಡಿಯಲ್ಲಿ ಸ್ವಾಗತ ಹಾಗೂ ಕೈಕಂಬ ಜಂಕ್ಷನ್ ನಲ್ಲಿ ಬಹಿರಂಗ ಸಭೆ ಸೋಮವಾರ ನಡೆಯಿತು.



ಬಿ.ಸಿ ರೋಡ್ ನ ತಲಪಾಡಿ ಟೋಲ್ ಗೇಟ್ ನಿಂದ ವಾಹನ ಜಾಥಾ ಸಾಗಿ ಬಂದು ಕೈಕಂಬ ಜಂಕ್ಷನ್ ನಲ್ಲಿ ಬಹಿರಂಗ ಸಭೆ ನಡೆಯಿತು.

ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಮೂನಿಷ್ ಆಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ರಸ್ತೆ, ದಾರಿದೀಪ, ಚರಂಡಿ ಮೊದಲಾದ ಅಭಿವೃದ್ಧಿ ಕಾರ್ಯಗಳ ಜೊತೆಗೆ ಜನರ ನೈತಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯತ್ತ ಕೂಡ ಎಸ್ ಡಿ ಪಿ ಐ ದೂರದೃಷ್ಟಿಯನ್ನಿಟ್ಟಿದೆ. ಈ ಬಾರಿ ಖಂಡಿತ ಜನರು ನನಗೆ ಅವಕಾಶ ಕಲ್ಪಿಸಿ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮಾತನಾಡಿ ಸರ್ವ ಧರ್ಮೀಯರನ್ನು ಸಮಾನತೆಯಿಂದ ಕಾಣುವ ಬಾಧ್ಯತೆ ಎಸ್ಡಿಪಿಐ ಪಕ್ಷಕ್ಕಿದೆ, ಮುಸ್ಲಿಂ ನಾಯಕತ್ವ ಕಾಂಗ್ರೆಸ್ ಪಕ್ಷಕ್ಕೆ ಅಪತ್ಯವಾಗಿದೆ, ಈ ಬಾರಿ ಜನತೆ ಕಣ್ಣೀರು ಭರಿಸುವ ಪಕ್ಷವನ್ನು ತಿರಸ್ಕರಿಸಿ ಕಣ್ಣೀರು ಒರೆಸುವ ಪಕ್ಷವಾದ ಎಸ್ಡಿಪಿಐ ಯನ್ನು ಆಶೀರ್ವದಿಸಲಿದ್ದಾರೆ ಎಂದರು.

ಪಕ್ಷದ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಮಾತಾಡಿ ಎಸ್ ಡಿ ಪಿ ಐ ಯಾವುದೇ ಪಕ್ಷದ ‘ಬಿ’ ಟೀಂ ಅಲ್ಲ, ಹೊರತಾಗಿ ಪಕ್ಷವು ಜನತೆಯ ಕಷ್ಟಗಳಿಗೆ ಸ್ಪಂದಿಸಿದ, ಶೋಷಿಣೆಗೊಳಗಾದವರ ‘ಎ’ ಟೀಂ ಆಗಿದೆ’ ಎಂದರು.

ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮುಲ್ಕಿ- ಮೂಡಬಿದ್ರೆ ಕ್ಷೇತ್ರದ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋ , ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ದ.ಕ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್, ಮಾತನಾಡಿದರು.

ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ, ದ.ಕ ಜಿಲ್ಲಾ ಕಾರ್ಯದರ್ಶಿಗಳಾದ ಶಾಕಿರ್ ಅಳಕೆಮಜಲು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ದ.ಕ ಜಿಲ್ಲಾ ಸಮಿತಿ ಸದಸ್ಯರುಗಳಾದ ಯೂಸುಫ್ ಆಲಡ್ಕ, ಅಬೂಬಕ್ಕರ್ ಮದ್ದ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರು, ಬಂಟ್ವಾಳ ಪುರಸಭಾ ಸದಸ್ಯರಾದ ಇದ್ರೀಸ್ ಪಿ.ಜೆ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.