ಡೈಲಿ ವಾರ್ತೆ:19 ಜನವರಿ 2023

ಕಲ್ಯಾಣ ನಾಡಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಕಲಬುರಗಿ: ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿಸಿದ ಹಕ್ಕು ಪತ್ರ ವಿತರಿಸಲು ಹಾಗೂ ನಾರಾಯಣಪುರ ಎಡದಂಡೆ ಕಾಲುವೆ ನವೀಕರಣದ ಕಾಮಗಾರಿ ಸೇರಿ ಹತ್ತು ಸಾವಿರ ಕೋಟಿ ರೂ. ಅಧಿಕ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಗೆ ಬಂದಿಳಿದರು.

ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಇಲ್ಲಿನ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಕಂದಾಯ ಸಚಿವ ಆರ್. ಅಶೋಕ, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ ಸೇರಿದಂತೆ ಪ್ರಮುಖರು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ತದ ನಂತರ ನೇರವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಕೊಡೆಕಲ್ ಗೆ ತೆರಳಿರುವ ಮೋದಿ, ನಂತರ ಮಧ್ಯಾಹ್ನ 2 ಗಂಟೆ ಸಮಾರಿಗೆ ಮಳಖೇಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.