ಡೈಲಿ ವಾರ್ತೆ:19 ಜನವರಿ 2023

ವಿಟ್ಲ: ಮನೆಯಲ್ಲಿ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಮನೆ ಲಕ್ಷಾಂತರ ರೂ. ನಷ್ಟ

ವಿಟ್ಲ: ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಮಾಣಿ ಸಮೀಪ ನಡೆದಿದೆ.

ಘಟನೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ದೀಪಾ ಎಂಬವರು ಮನೆಯಲ್ಲಿ ಒಬ್ಬರೇ ಇದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ.
ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ.