ಡೈಲಿ ವಾರ್ತೆ:20 ಜನವರಿ 2023
ಮುಸ್ಲಿಮರ ಬಗ್ಗೆ ಮೋದಿ ಮಾತುಗಳು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ: ಬಿ.ಕೆ ಹರಿಪ್ರಸಾದ್ ಟೀಕೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾತನ್ನು ಮುಸ್ಲಿಮರು ಕೇಳುತ್ತಾರೆ ಎಂದು ಚುನಾವಣೆ ಸಂದರ್ಭದಲ್ಲಿ ಮುಂದೆಬಿಟ್ಟಿದ್ದಾರೆ ಎಂದು ಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.
ಶುಕ್ರವಾರ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಆಯೋಜಿಸಿದ್ದ, ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಿದೆ, ಅವರಿಗೆ ಲವ್ ಜಿಹಾದ್, ಹಿಜಾಬ್, ಹಲಾಲ್, ಆಝಾನ್ ವಿವಾದ ಹೊಡೆತ ಕೊಡುತ್ತೆ ಎಂದು ಗೊತ್ತಾಗಿದೆ. ಅದಕ್ಕೆ ಯಡಿಯೂರಪ್ಪ ಅವರನ್ನು ವಾಪಸ್ ಕರೆಸಿಕೊಂಡಿದ್ದಾರೆ. ಮುಸ್ಲಿಮರ ಪರ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.
ಮುಸ್ಲಿಮರ ಬಗ್ಗೆ ಪ್ರಧಾನಿ ಮೋದಿ ಮಾತುಗಳು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ. ಅವರ ರಾಜಕಾರಣವೇ ದ್ವೇಷ ಹಾಗೂ ಪ್ರತಿಕಾರವಾಗಿದೆ ಎಂದ ಅವರು, ಬಿಜೆಪಿಯವರು ಸುಳ್ಳೇ ದೇವರೆಂದು ನಂಬಿದವರು ಅವರು. ಹಿಂಸೆಯೇ ಅವರ ಸಿದ್ಧಾಂತ ಎಂದು ವಾಗ್ದಾಳಿ ನಡೆಸಿದರು.
ಗೃಹ ಮಂತ್ರಿಗಳು ಪರಪ್ಪನ ಅಗ್ರಹಾರ ಹೇಗಿದೆ ಎಂದು
ಪರಿಶೀಲನೆ ಮಾಡಿ ಬಂದಿದ್ದಾರೆ. ನಾವು ಅಧಿಕಾರಕ್ಕೆ ಬಂದ
ಕೂಡಲೇ ಅವರನ್ನ ಜೈಲಿಗೆ ಕಳಿಸುತ್ತೇವೆ. ಎಲ್ಲರೂ ಜೈಲಿಗೆ
ಸೇರುವ ಕಾಲ ಸನಿಹವಾಗಿದೆ. ಮುಂದಿನ ದಿನಗಳಲ್ಲಿ
ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು
ಅವರು ಹೇಳಿದರು.