ಡೈಲಿ ವಾರ್ತೆ:22 ಜನವರಿ 2023

ಕೋಟ‌: ಬಸ್ಸಿಗೆ ಬೈಕ್ ಡಿಕ್ಕಿ ಇಬ್ಬರು ಗಂಭೀರ

ಕೋಟ :ಕೋಟ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ 3:30 ರ ಸುಮಾರಿಗೆ ಕೋಟದಲ್ಲಿ ನಡೆದಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಬಸ್ಸು‌ ಏಕಾಏಕಿ ಕೋಟ ಬಸ್ಸು ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಬಸ್ ನಿಲ್ಲಿಸಿದ್ದರಿಂದ ಬಸ್ಸಿನ‌ ಹಿಂದೆ ಬರುತ್ತಿದ್ದ ಬೈಕ್ ಬಸ್ಸಿನ‌ ಹಿಂದೆ ಡಿಕ್ಕಿ ಹೊಡೆದು ಬೈಕ್ ಸವಾರರಾದ ಗಣೇಶ್(26) ಮತ್ತು ಸುಮಂತ್(30) ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ತಕ್ಷಣ ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುಗಳನ್ನು ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕಾಗಿಮಿಸಿದ ಕೋಟ ಠಾಣಾಧಿಕಾರಿ ಮಧು ಬಿಇ ಹಾಗೂ ಸಿಬ್ಬಂದಿಗಳು ಪರಿಶೀಲಿಸಿ ಬಸ್ಸಿನ‌ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಕೋಟ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.