ಬೆಂಗಳೂರು: ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನಾಗಿ ಶಾಸಕ ಯು.ಟಿ.ಖಾದರ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಈ ನೇಮಕದ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಪಕ್ಷ ತೊರೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿರುವ ಮತ್ತೋರ್ವ ಹಿರಿಯ ನಾಯಕ ಯು.ಟಿ.ಖಾದರ್ ಅವರಿಗೆ ಈ ಹುದ್ದೆ ನೀಡಿದೆ.